new ration card application date 2024:- ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳಿಗೆ ಹಾಗೂ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯ ಸರ್ಕಾರವು ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ಹಾಗೂ ಅರ್ಹ ಕುಟುಂಬಗಳು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು ಮತ್ತು ಬೇಕಾಗುವ ದಾಖಲಾತಿಗಳ ವಿವರ ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿಯೋಣ
ಸ್ನೇಹಿತರೆ ಇದೇ ರೀತಿ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳಾದ ಯುವ ನಿಧಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರತಿದಿನ ಮಾಹಿತಿ ಪಡೆಯಬಹುದು ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರುವಂತ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಸಂಪೂರ್ಣ ವಿವರವನ್ನು ಪ್ರತಿದಿನ ಪಡೆಯಬಹುದು
ಇದರ ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಬೇಕಾಗುವಂತೆ ಲಿಂಕ್ ಪ್ರತಿಯೊಂದು ಮಾಹಿತಿ ಸಿಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಪ್ರತಿಯೊಂದು ವಿಷಯಗಳು ತಿಳಿಯುತ್ತವೆ
ಹೊಸ ರೇಷನ್ ಕಾರ್ಡ್ (new ration card application date 2024)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಒಂದು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬ ಏನೆಲ್ಲಾ ಅಂದರೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ತಿಂಗಳು 5,000 ರಿಂದ 8,000 ವರೆಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಆದ್ದರಿಂದ ಈಗ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಲು ಸಾಕಷ್ಟು ಜನರು ಎದುರು ನೋಡುತ್ತಿದ್ದಾರೆ ಹಾಗೂ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಈಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಟ್ಟಿದೆ
ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ಈಗಾಗಲೇ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರತಿ ತಿಂಗಳು ಒಂದು ದಿನ ಅಥವಾ ಎರಡು ದಿನ ಅಥವಾ ಕೇವಲ 4 ಗಂಟೆಗಳ ಅವಕಾಶ ಮಾಡಿಕೊಟ್ಟಿತ್ತು ಆದರೆ ಸರ್ವ ಸಮಸ್ಯೆಯಿಂದ ಸಾಕಷ್ಟು ಜನರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಆದ್ದರಿಂದ ಇದನ್ನು ಮನಗಂಡಂತ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಕೆಲವು ಅರ್ಹತೆಗಳು ಹೊಂದಿದಂತ ಜನರಿಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ
ಯಾರು ಅರ್ಜಿ ಸಲ್ಲಿಸಬಹುದು (new ration card application date 2024)..?
ಸ್ನೇಹಿತರೆ ನಮ್ಮ ರಾಜ್ಯ ಸರಕಾರವು ಇದೀಗ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಅಂದರೆ ನಮ್ಮ ರಾಜ್ಯದಲ್ಲಿ ಇರುವಂತ ಕೂಲಿ ಕಾರ್ಮಿಕರಿಗೆ ಹಾಗೂ ಗಾರೆ ಕೆಲಸ ಮಾಡುವಂಥವರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳು ಹಾಗೂ ಕಟ್ಟಡ ಕಾರ್ಮಿಕರು ಮತ್ತು ಇತರ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳು ಅಥವಾ ಅರ್ಜಿದಾರರು ಕಡ್ಡಾಯವಾಗಿ ಈ ಶ್ರಮ ಕಾಡು ಹೊಂದಿರಬೇಕು.!
ಹೌದು ಸ್ನೇಹಿತರೆ ಪ್ರಸ್ತುತ ರಾಜ್ಯ ಸರ್ಕಾರವು ಈ ಶ್ರಮ ಕಾರ್ಡು ಹೊಂದಿದಂತಹ ಕುಟುಂಬಗಳಿಗೆ ಅಥವಾ ಅರ್ಜಿದಾರರಿಗೆ ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ನಿಮ್ಮ ಬಳಿ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬಹುದು ಮತ್ತು ಈ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಹೊಸದಾಗಿ BPL ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು (new ration card application date 2024).?
- ಹೌದು ಸ್ನೇಹಿತರೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಅಥವಾ ಅರ್ಜಿದಾರರು ಕಡ್ಡಾಯವಾಗಿ 1.20 ಲಕ್ಷ ರೂಪಾಯಿ ಒಳಗಡೆ ಕುಟುಂಬದ ವಾರ್ಷಿಕ ಆದಾಯ ಹೊಂದಿರಬೇಕು
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಅಥವಾ ಅರ್ಜಿದಾರರು ಕಡ್ಡಾಯವಾಗಿ 7.5 ಎಕರೆ ಗಿಂತ ಕಡಿಮೆ ಭೂಮಿ ಅಥವಾ ಜಮೀನು ಹೊಂದಿರಬೇಕು
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಅಥವಾ ಅರ್ಜಿದಾರರು ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ 1000 ಚದರ್ ಮೀಟರ್ ಗಿಂತ ಭವ್ಯ ಬಂಗಲೆ ಅಥವಾ ಫ್ಲಾಟ್ ಹೊಂದಿರಬಾರದು
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ತಮ್ಮ ಸ್ವಂತ ಓಡಾಡತಕ್ಕಾಗಿ ಇರುವಂತ ವೈಟ್ ಬೋರ್ಡ್ ಕಾರ್ ಅಥವಾ ಇತರ 10 ಲಕ್ಷ ರೂಪಾಯಿಗಿಂತ ಬೆಲೆಬಾಳುವ ಸ್ವಂತ ವಾಹನವನ್ನು ಹೊಂದಿರಬಾರದು
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳು ಅಥವಾ ಅರ್ಜಿದಾರರು ಕುಟುಂಬಗಳಲ್ಲಿ ಯಾವುದೇ ವ್ಯಕ್ತಿಯು ಸರ್ಕಾರಿ ಅಥವಾ ಅರೆ ಸರಕಾರಿ ಅಥವಾ ಉನ್ನತ ಸಂಬಳ ಪಡೆಯುವಂತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರಬಾರದು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ (new ration card application date 2024)..?
ಸ್ನೇಹಿತರೆ ನೀವು ಮೇಲೆ ನೀಡಿದಂಥ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರವು ನವೆಂಬರ್ ಮೂರನೇ ತಾರೀಕಿನಿಂದ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಹಾಗೂ ಅರ್ಹ ಕುಟುಂಬಗಳು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (new ration card application date 2024)..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಈ ಶ್ರಮ ಕಾರ್ಡ್
- 6 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇತರ ಅಗತ್ಯ ದಾಖಲಾತಿಗಳು
ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ (new ration card application date 2024)..?
ಸ್ನೇಹಿತರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಅಥವಾ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಮ್ಮ ಸರಕಾರಿ ಯೋಜನೆಗಳು ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ & ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಿ